ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ ಒಂದು ಕಬ್ಬಿಣದ ಸಲಾಕೆ (ರಾಡ್) ತಲೆಗೆ ಹೊಡೆಯುತ್ತದೆ. ಈ ಬಗ್ಗೆ ಸಾರ್ವಜನಿಕರು ಗ್ರಂಥಾಲಯ ಮೇಲ್ವಿಚಾರಕರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಂಥಾಲಯಕ್ಕೆ ದಿನಪತ್ರಿಕೆಗಳನ್ನು ಓದಲು ವಯಸ್ಸಾದವರೂ ಬರುತ್ತಾರೆ. ಅವರಿಗೆ ಮೆಟ್ಟಿಲು ಇಳಿದು ಬರುವಾಗ ಆಕಸ್ಮಿಕವಾಗಿ ಈ ಕಬ್ಬಿಣದ ಸಲಾಕೆ ತಲೆಗೆ ಹೊಡೆದರೆ ಅನಾಹುತಗಳಾಗುವ ಸಾಧ್ಯತೆಯಿರುತ್ತದೆ. ಗ್ರಂಥಾಲಯ ಇಲಾಖೆ ಅಽಕಾರಿಗಳು ಕಬ್ಬಿಣದ ಸಲಾಕೆಯನ್ನು ತೆರವುಗೊಳಿಸುವ ಮೂಲಕ ಓದುಗರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಶ್ರೀನಿವಾಸ್, ಚಾಮುಂಡಿಪುರಂ, ಮೈಸೂರು
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…