ಓದುಗರ ಪತ್ರ
ಮೈಸೂರು ನಗರದ ದಟ್ಟಗಳ್ಳಿ ಜೋಡಿಬೇವಿನ ಮರ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಬಿದ್ದು ಅಪಘಾತಕ್ಕೊಳಗಾಗಿರುವ ಘಟನೆಗಳೂ ನಡೆದಿವೆ. ಮೈಸೂರು ಪಾಲಿಕೆಯವರು ಗುಂಡಿಗಳಿಗೆ ಮಣ್ಣು ತುಂಬಿದ್ದರೂ ಮಳೆ ಬಂದಾಗ ಮಣ್ಣೆಲ್ಲಾ ಕೊಚ್ಚಿ ಹೋಗಿ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ.
ಈ ಪ್ರದೇಶವು ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸಿರುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತಿದ್ದು, ಶಾಸಕರು ಹಾಗೂ ಮೈಸೂರು ಪಾಲಿಕೆ ಅಧಿಕಾರಿಗಳು ರಸ್ತೆಗೆ ತೇಪೆ ಹಾಕುವ ಬದಲು ಹೊಸದಾಗಿ ಡಾಂಬರೀಕರಣ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.
-ಎನ್.ಆರ್.ಮಲ್ಲಿಕಾರ್ಜುನ, ದಟ್ಟಗಳ್ಳಿ, ಮೈಸೂರು
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…