Mysore
26
haze

Social Media

ಮಂಗಳವಾರ, 18 ನವೆಂಬರ್ 2025
Light
Dark

ಓದುಗರ ಪತ್ರ: ನೀರಿನ ಪೈಪ್‌ಲೈನ್ ಸರಿಪಡಿಸಿ

ಎಚ್‌.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ.
ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ ಹಳೆಯ ಪೈಪ್‌ಲೈನ್‌ಗಳು ಅಲ್ಲಲ್ಲಿ ಒಡೆದುಹೋಗಿವೆ.
ಬಂಗ್ಲಿಹುಂಡಿಯ ರೈತ ಸಂಪರ್ಕ ಕೇಂದ್ರದ ಬಳಿಯೂ ಜೆಜೆಎಂ ಕಾಮಗಾರಿ ಮಾಡಲಾಗಿದ್ದು, ಈ ವೇಳೆ ಒಡೆದುಹೋದ ಪೈಪನ್ನು ಸರಿಪಡಿಸದೆ ಅದರ ಮೇಲೆಯೇ ಕಾಂಕ್ರೀಟ್ ಹಾಕಿ ಮುಚ್ಚಿರುವುದರಿಂದ ಕಳೆದ ಎರಡು ತಿಂಗಳುಗಳಿಂದ ನೀರು ಸೋರಿಕೆಯಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರಿನೊಂದಿಗೆ ಮಣ್ಣು ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ವಿಧಿ ಇಲ್ಲದೆ ಸಾರ್ವಜನಿಕರು ಕಲುಷಿತ ನೀರನ್ನು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ನೀರಿನ ಪೈನ್‌ಲೈನನ್ನು ಸರಿಪಡಿಸಬೇಕಿದೆ.
-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ

Tags:
error: Content is protected !!