ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ.
ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ ಹಳೆಯ ಪೈಪ್‌ಲೈನ್‌ಗಳು ಅಲ್ಲಲ್ಲಿ ಒಡೆದುಹೋಗಿವೆ.
ಬಂಗ್ಲಿಹುಂಡಿಯ ರೈತ ಸಂಪರ್ಕ ಕೇಂದ್ರದ ಬಳಿಯೂ ಜೆಜೆಎಂ ಕಾಮಗಾರಿ ಮಾಡಲಾಗಿದ್ದು, ಈ ವೇಳೆ ಒಡೆದುಹೋದ ಪೈಪನ್ನು ಸರಿಪಡಿಸದೆ ಅದರ ಮೇಲೆಯೇ ಕಾಂಕ್ರೀಟ್ ಹಾಕಿ ಮುಚ್ಚಿರುವುದರಿಂದ ಕಳೆದ ಎರಡು ತಿಂಗಳುಗಳಿಂದ ನೀರು ಸೋರಿಕೆಯಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರಿನೊಂದಿಗೆ ಮಣ್ಣು ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ವಿಧಿ ಇಲ್ಲದೆ ಸಾರ್ವಜನಿಕರು ಕಲುಷಿತ ನೀರನ್ನು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ನೀರಿನ ಪೈನ್‌ಲೈನನ್ನು ಸರಿಪಡಿಸಬೇಕಿದೆ.
-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…