Andolana originals

ಓದುಗರ ಪತ್ರ: ಮೈಸೂರು ನಗರ ಬಸ್‌ ನಿಲ್ದಾಣದ ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ನಗರ ಬಸ್ ನಿಲ್ದಾಣದೊಳಗಿನ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದ್ದು, ರಸ್ತೆಗೆ ಹಾಕಿದ್ದ ಡಾಂಬರ್ ಕಿತ್ತುಬಂದಿದೆ. ಅಲ್ಲದೆ ಅಲ್ಲಿನ ಕಲ್ಲುಗಳೆಲ್ಲ ರಸ್ತೆಗೆ ಹರಡಿಕೊಂಡಿವೆ.

ನಿತ್ಯ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸೇರಿದಂತೆ ನೂರಾರು ಪ್ರಯಾಣಿಕರು ಈ ನಿಲ್ದಾಣದ ಮೂಲಕ ಬಸ್ ಹತ್ತಿ ನಗರದ ವಿವಿಧ ಭಾಗಗಳಿಗೆ ಪ್ರಯಾಣಿಸುತ್ತಾರೆ. ಇಂತಹ ಬಸ್ ನಿಲ್ದಾಣದಲ್ಲಿ ಎಲ್ಲ ಮೂಲಸೌಕರ್ಯಗಳಿರಬೇಕಿತ್ತು.

ಆದರೆ ಇಲ್ಲಿ ನಿಲ್ದಾಣದ ರಸ್ತೆಗಳೇ ಗುಂಡಿ ಬಿದ್ದಿದ್ದು, ಜನರು ಓಡಾಡಲು ಕಷ್ಟವಾಗುತ್ತಿದೆ. ಮಳೆಗಾಲದಲ್ಲಂತೂ ಈ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ಬಸ್‌ಗಳು ಸಂಚರಿಸಿದಂತೆಲ್ಲ ಆ ನೀರೆಲ್ಲ ಪ್ರಯಾಣಿಕರಿಗೆ ರಾಚುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಕೂಡಲೇ ನಿಲ್ದಾಣದೊಳಗಿನ ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿಪಡಿಸಬೇಕಿದೆ.

-ಬಿ. ಎಂ. ಅನುಷ, ಪತ್ರಿಕೋದ್ಯಮ ವಿಭಾಗ, ಮಾನಸ ಗಂಗೋತ್ರಿ, ಮೈಸೂರು

 

andolana

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

25 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

3 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

3 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

3 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

3 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago