ಮೈಸೂರು ನಗರ- ಎಚ್.ಡಿ.ಕೋಟೆ ರಸ್ತೆಯಲ್ಲಿ ಎಚ್.ಮಟಕೆರೆ ಯಲ್ಲಿ ನೂತನವಾಗಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಆದರೆ ಸೇತುವೆ ರಸ್ತೆ ತೀರಾ ಹಾಳಾಗಿದೆ. ಇದರಿಂದಾಗಿ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಇಲ್ಲಿನ ಗ್ರಾಮಸ್ಥರು ಅನಾರೋಗ್ಯ ಮೊದಲಾದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯಲು ತೀವ್ರ ತೊಂದರೆಯಾಗಿದೆ.
ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ರಸ್ತೆ ದುರಸ್ತಿಯ ಬಗ್ಗೆ ಗಮನ ಹರಿಸಿಲ್ಲ. ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ





