ಮೈಸೂರಿನ ವಿಜಯನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮತ್ತು ಕನ್ನಡ ಸಾಹಿತ್ಯ ಪರಿಷತ್ ಕಚೇರಿ ರಸ್ತೆಗೆ ಹೊಂದಿಕೊಂಡಂತಿರುವ ಗೇಟ್ ಬಳಿ ಮ್ಯಾನ್‌ಹೋಲ್ ಸೋರಿಕೆಯಾಗುತ್ತಿದ್ದು, ಕಳೆದ ಐದು-ಆರು ದಿನಗಳಿಂದ ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ದುರ್ವಾಸನೆ ಬೀರಲಾರಂಭಿಸಿದೆ.
ಇಲ್ಲಿ ಇಂಜಿನಿಯರಿಂಗ್ ಕಾಲೇಜು ಮತ್ತು ಕನ್ನಡ ಸಾಹಿತ್ಯ ಪರಿಷತ್ ಕಚೇರಿ ಇರುವುದರಿಂದ ಇಲ್ಲಿಗೆ ಬರುವ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಕೊಳಚೆ ನೀರನ್ನು ತುಳಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ದುರ್ವಾಸನೆ ತಾಳಲಾರದೆ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಿದೆ.
ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿದ್ದು, ಇಂತಹ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವಜನಿಕರಿಗೆ ರೋಗಗಳು ಉಲ್ಬಣಗೊಳ್ಳುವ ಆತಂಕ ಎದುರಾಗಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕಾದ ಮೈಸೂರು ಮಹಾನಗರ ಪಾಲಿಕೆಯವರು ನಗರದ ಪ್ರಮುಖ ರಸ್ತೆಯಲ್ಲಿಯೇ ಅನೈರ್ಮಲ್ಯ ವಾತಾವರಣ ನಿರ್ಮಾಣವಾ ಗಿದ ರೂ ಯಾವುದೇ ಕ್ರಮಕೈಗೊಳ ದಿರುವುದು ಬೇಸರದ ಸಂಗತಿ. ಸಂಬಂಧಪಟ್ಟವರು ಕೂಡಲೇ ಈ ಮ್ಯಾನ್ ಹೋಲ್‌ಅನ್ನು ಸರಿಪಡಿಸಬೇಕಿದೆ.
-ಆರ್.ಯಶಸ್, ಮೈಸೂರು.





