ಹೆಗ್ಗಡದೇವನಕೋಟೆ ತಾಲ್ಲೂಕಿನ ಭೀಮನಕೊಲ್ಲಿ ದೇವಾಲಯಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಾರೆ. ಕಬಿನಿ ಜಲಾಶಯದಿಂದ ಕೆಂಚನಹಳ್ಳಿ ಮುಖಾಂತರ ಎನ್.ಬೇಗೂರು ಮತ್ತು ಭೀಮನಕೊಲ್ಲಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರಸಾಹಸ ಪಡುವಂತಾಗಿದೆ. ರಸ್ತೆ ದುರಸ್ತಿ ಮಾಡುವಂತೆ ಸ್ಥಳೀಯರು ಹಲವಾರು ಬಾರಿ ಹೆಗ್ಗಡದೇವನಕೋಟೆ ತಾಲ್ಲೂಕಿನ ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗರ್ಭಿಣಿಯರು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಕರೆತರಲೂ ತೊಂದರೆಯಾಗುತ್ತಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಸಂಬಂಧ ಕ್ರಮ ವಹಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
–ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು





