ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನವು ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಂಡಿದ್ದು, ಸಾರ್ವಜನಿಕ ಉಪಯೋಗದಿಂದ ದೂರಾಗಿದೆ.
ಗ್ರಾಮದಲ್ಲಿನ ಈ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು 20 ವರ್ಷಗಳಾಗಿದೆ. ಹಿಂದೆ ಈ ಸಮುದಾಯ ಭವನದಲ್ಲಿ ವಿವಿಧ ಕಾರ್ಯಕ್ರಮಗಳು, ಸಭೆಗಳು ನಡೆಯುತ್ತಿದ್ದವು. ಅಲ್ಲದೆ ಬಡ ವರ್ಗದ ಜನರು ಮದುವೆ, ನಾಮಕರಣ, ನಿಶ್ಚಿತಾರ್ಥಗಳನ್ನು ಮಾಡುತ್ತಿದ್ದರು. ಈಗ ಸಮುದಾಯ ಭವನ ಶಿಥಿಲಗೊಂಡು ಜನೋಪಯೋಗದಿಂದ ದೂರಾಗಿದೆ. ಇನ್ನು ಈ ಕಟ್ಟಡದ ಮೇಲ್ಛಾವಣಿಗೆ ಸೀಟ್‌ಗಳೆಲ್ಲ ತುಕ್ಕು ಹಿಡಿದು ತೂತು ಬಿದ್ದಿವೆ.
ಇದರಿಂದಾಗಿ ಮಳೆ ನೀರು ಸೋರುತ್ತಿದೆ. ಕಟ್ಟಡದ ಗೋಡೆಗಳೂ ಬಿರುಕು ಬಿಟ್ಟಿದ್ದು, ಕುಸಿದುಬೀಳುವ ಅಪಾಯದಲ್ಲಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸಮುದಾಯ ಭವನವನ್ನು ದುರಸ್ತಿಗೊಳಿಸಬೇಕಿದೆ.
-ಸಂಜಯ್, ಹುಣಸೇಕುಪ್ಪೆ ಎಚ್.ಡಿ.ಕೋಟೆ ತಾ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…