ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದ ಮುಂಭಾಗದಲ್ಲಿರುವ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಅನೇಕದಿನಗಳೇ ಕಳೆದಿದ್ದು, ಭಕ್ತರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
ಭಕ್ತರಿಗೆ ಪ್ರಸಾದ ಸೇವನೆಯ ಬಳಿಕ ಅನುಕೂಲವಾಗಲಿ ಎಂದು ಇಲ್ಲಿ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಆದರೆ ಈ ಘಟಕ ಅನೇಕ ದಿನಗಳ ಹಿಂದೆಯೇ ಕೆಟ್ಟು ಹೋಗಿದ್ದು, ಕುಡಿಯುವ ನೀರಿಗಾಗಿ ಭಕ್ತರು ಅಕ್ಕಪಕ್ಕದ ಅಂಗಡಿ, ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಅಲ್ಲದೆ ಕೆಲವರು ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ತಂದು ಬಳಿಕ ಬಾಟಲಿಯನ್ನು ಇಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ.
ಈಗ ಆಷಾಢ ಮಾಸವಾಗಿರುವುದರಿಂದ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆಷಾಢ ಶುಕ್ರವಾರವಂತೂ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕಾದದ್ದು ಚಾಮುಂಡಿಬೆಟ್ಟ ಆಡಳಿತ ಮಂಡಳಿಯ ಕರ್ತವ್ಯ. ಆದರೆ ಇಲ್ಲಿನ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದರೂ ಅದನ್ನು ರಿಪೇರಿ ಮಾಡಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ.
ಇನ್ನು ಬೆಟ್ಟದ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳಲ್ಲದೆ ಮುಂಜಾನೆಯ ನಸುಕಿನ ಕತ್ತಲಿನಲ್ಲಿಯೇ ಭಕ್ತರು ಕಾಡುಪ್ರಾಣಿಗಳು ಮತ್ತು ಕಳ್ಳರ ಆತಂಕದ ನಡುವೆ ಬೆಟ್ಟ ಹತ್ತಬೇಕಾಗಿದೆ. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಚಾಮುಂಡಿಬೆಟ್ಟಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…
ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…