ಓದುಗರ ಪತ್ರ
ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್ ಬಳಿಯ ಮ್ಯಾನ್‌ಹೋಲ್ ಒಳಗೆ ಕಸ-ಕಡ್ಡಿ ಸಿಲುಕಿಕೊಂಡಿದ್ದು, ಮ್ಯಾನ್ ಹೋಲ್ ಮುಚ್ಚಳದಿಂದ ಚರಂಡಿ ನೀರು ಕಳೆದ ಐದು-ಆರು ದಿನಗಳಿಂದ ಉಕ್ಕಿ ರಸ್ತೆಗೆ ಹರಿಯುತ್ತಿದ್ದು, ಎಲ್ಲೆಡೆ ದುರ್ನಾತ ಬೀರುತ್ತಿದೆ. ಅದಲ್ಲದೇ ಈ ರಸ್ತೆಯಲ್ಲಿಯೇ ಕೊಂಚ ದೂರದಲ್ಲಿ ಬಸ್ ತಂಗುದಾಣವಿದ್ದು, ಅಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರಿಗೆ ವಾಹನ ಸಂಚಾರದಿಂದ ಚರಂಡಿ ನೀರು ರಾಚುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
– ಆರ್.ಯಶಸ್, ಮೈಸೂರು
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…