ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು, ರಸ್ತೆ ಗುರುತಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ತರಗತಿಗಳಿಗೆ, ಪರೀಕ್ಷೆಗಳಿಗೆ ಹಾಗೂ ಕಚೇರಿ ಕೆಲಸಗಳಿಗೆ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ರಸ್ತೆಯ ದುಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತಲುಪಲಾಗದೆ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಮುಕ್ತ ವಿವಿ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.
-ಎನ್.ಎಚ್. ಮನೋಜ್, ಪತ್ರಿಕೋದ್ಯಮ ಮತ್ತು ಸಂವಹನಾ ಸಮೂಹ ವಿಭಾಗ , ಮಾನಸ ಗಂಗೋತ್ರಿ, ಮೈಸೂರು





