ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ.
ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ರಸ್ತೆಯ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಂಡು, ಸಾರ್ವಜನಿಕರ ಹಿತದೃಷ್ಟಿಯಿಂದ ಅಭಿವೃದ್ಧಿಪಡಿಸಲು ಮುಂದಾಗಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





