ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ ಸಮೀಪವೇ ಶಾಲೆ ಇರುವುದರಿಂದ ಶಾಲಾ ಮಕ್ಕಳು ರಸ್ತೆಯನ್ನು ದಾಟಲು ಹರಸಾಹಸ ಪಡಬೇಕಾಗಿದೆ. ಸಂಬಂಧಪಟ್ಟವರು ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸಬೇಕು ಹಾಗೂ ವಾಹನಗಳ ಸಂಚಾರ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಸೈಯದ್ ಅಫ್ತಾಬ್, ಮೈಸೂರು




