Categories: Andolana originals

ಓದುಗರ ಪತ್ರ: ಹಾಳಾಗಿರುವ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಚಾಮರಾಜ ಜೋಡಿ ರಸ್ತೆ ಸಮೀಪ ಇರುವ ಬಿಗಾಸ್ ಎಲೆಕ್ಟ್ರಿಕ್ ವಾಹನ ಶೋ ರೂಂ ಪಕ್ಕದ ಕಾಂಕ್ರೀಟ್ ರಸ್ತೆಯನ್ನು ಒಳಚರಂಡಿ ಪೈಪ್‌ಲೈನ್ ಅಳವಡಿಕೆಗಾಗಿ ಅಗೆದು ಎರಡು ವರ್ಷಗಳೇ ಕಳೆದಿದ್ದರೂ ದುರಸ್ತಿ ಮಾಡದೇ ಇರುವುದ ರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿವೆ. ಇನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಯೂ ಇತ್ತ ಗಮನ ಹರಿಸುತ್ತಿಲ್ಲ. ಈ ಭಾಗದ ಶಾಸಕರಂತೂ ಇತ್ತ ತಲೆ ಹಾಕುವುದಿಲ್ಲ. ಹೀಗಾಗಿ ಇಲ್ಲಿನ ಜನರಿಗೆ ಸಮಸ್ಯೆಯನ್ನು ಯಾರ ಬಳಿ ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ.

ವರ್ಷಕ್ಕೊಮ್ಮೆ ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿಸಿಕೊಳ್ಳುವ ನಗರಪಾಲಿಕೆಯವರಿಗೆ ರಸ್ತೆ ಮೊದಲಾದ ಮೂಲಭೂತ ಸೌಲಭ್ಯವನ್ನು ಕಲ್ಪಿಸಬೇಕು ಎಂಬುದು ಅರಿವಿಗೆ ಬಾರದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಸಂಬಂಧಪಟ್ಟವರು ಈಗಲಾದರೂ ಹಾಳಾಗಿರುವ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಮಹತಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

20 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

31 mins ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

52 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

1 hour ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago