ಮೈಸೂರಿನ ಚಾಮರಾಜ ಜೋಡಿ ರಸ್ತೆ ಸಮೀಪ ಇರುವ ಬಿಗಾಸ್ ಎಲೆಕ್ಟ್ರಿಕ್ ವಾಹನ ಶೋ ರೂಂ ಪಕ್ಕದ ಕಾಂಕ್ರೀಟ್ ರಸ್ತೆಯನ್ನು ಒಳಚರಂಡಿ ಪೈಪ್‌ಲೈನ್ ಅಳವಡಿಕೆಗಾಗಿ ಅಗೆದು ಎರಡು ವರ್ಷಗಳೇ ಕಳೆದಿದ್ದರೂ ದುರಸ್ತಿ ಮಾಡದೇ ಇರುವುದ ರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿವೆ. ಇನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಯೂ ಇತ್ತ ಗಮನ ಹರಿಸುತ್ತಿಲ್ಲ. ಈ ಭಾಗದ ಶಾಸಕರಂತೂ ಇತ್ತ ತಲೆ ಹಾಕುವುದಿಲ್ಲ. ಹೀಗಾಗಿ ಇಲ್ಲಿನ ಜನರಿಗೆ ಸಮಸ್ಯೆಯನ್ನು ಯಾರ ಬಳಿ ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ.
ವರ್ಷಕ್ಕೊಮ್ಮೆ ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿಸಿಕೊಳ್ಳುವ ನಗರಪಾಲಿಕೆಯವರಿಗೆ ರಸ್ತೆ ಮೊದಲಾದ ಮೂಲಭೂತ ಸೌಲಭ್ಯವನ್ನು ಕಲ್ಪಿಸಬೇಕು ಎಂಬುದು ಅರಿವಿಗೆ ಬಾರದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಸಂಬಂಧಪಟ್ಟವರು ಈಗಲಾದರೂ ಹಾಳಾಗಿರುವ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಮಹತಿ, ಮೈಸೂರು
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…