ಬೆಳವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳವಾಡಿ, ಕೆ.ಹೆಚ್.ಬಿ. ಕಾಲೋನಿ ಹಾಗೂ ಹೂಟಗಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಒಳಚರಂಡಿ ಪೈಪ್ ಲೈನ್ ದುರಸ್ತಿ ಮಾಡಲು ತೆಗೆದ ಗುಂಡಿಗಳನ್ನು ಕಳೆದ ಎರಡು ವರ್ಷಗಳಿಂದ ಸರಿಯಾಗಿ ಮುಚ್ಚದೆ ಹಾಗೆ ಬಿಟ್ಟಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಹಲವಾರು ಬಾರಿ ಅಪಘಾತಗಳು ನಡೆದು ವಾಹನ ಸವಾರರು ಕೈಕಾಲು ಮುರಿದುಕೊಂಡಿದ್ದಾರೆ. ಈ ಸಮಸ್ಯೆ ಕುರಿತು ಸಾರ್ವಜನಿಕರು ಸ್ಥಳೀಯ ಅಧಿಕಾರಿಗಳ ಗಮನ ಸೆಳೆದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಸದರಿ ರಸ್ತೆಯನ್ನು ಡಾಂಬರೀಕರಣ ಮಾಡಿಸುವ ಮೂಲಕ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಆರ್. ಆದರ್ಶ್, ಡಿ. ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜು, ಮೈಸೂರು



