ಮೈಸೂರು ನಗರದ ಶ್ರೀರಾಂಪುರ ೨ನೇ ಹಂತದ ೧೫ನೇ ಕ್ರಾಸ್ ರಸ್ತೆಯಲ್ಲಿ ಯುಜಿಡಿ ಪೈಪ್ ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆಯಲಾಗಿತ್ತು. ಇದೀಗ ಯುಜಿಡಿ ಪೈಪ್ ಲೈನ್ ಅಳವಡಿಸಿ ತಿಂಗಳುಗಳಾದರೂ ರಸ್ತೆಯನ್ನು ದುರಸ್ತಿ ಮಾಡದೆ ಹಾಗೆಯೇ ಬಿಟ್ಟಿ ರುವುದರಿಂದ ಈ ರಸ್ತೆಯಲ್ಲಿ ವಾಹನ ಗಳ ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಕೆ.ಪಿ.ಬಸವಯ್ಯ, ಶ್ರೀರಾಂಪುರ, ಮೈಸೂರು





