ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು ವಾಹನ ಸವಾರರು ಈ ಮಾರ್ಗದಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆಯಾಗುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವುದು ಅನಿವಾರ್ಯವಾಗಿದೆ.
ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿ ಮಾಡುವ ಮೂಲಕ ಸುಗಮ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ , ಮೈಸೂರು




