ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ವಾಯುವಿಹಾರಕ್ಕೆ ಬರುತ್ತಾರೆ.
ಕ್ರೀಡಾಂಗಣದಲ್ಲಿ ವಿಶ್ರಮಿಸಲು ಅಲ್ಲಲ್ಲಿ ಕಾಂಕ್ರೀಟ್ ಬೆಂಚ್‌ಗಳನ್ನು ಹಾಕಲಾಗಿದ್ದು, ಕೆಲವು ಬೆಂಚ್‌ಗಳು ಮುರಿದು ಹೋಗಿ ವರ್ಷಗಳೇ ಕಳೆದರೂ ಸಂಬಂಧಪಟ್ಟವರು ಹೊಸದಾಗಿ ಬೆಂಚ್‌ಗಳನ್ನು ಅಳವಡಿಸಿಲ್ಲ. ಕ್ರೀಡಾಂಗಣದಲ್ಲಿ ಖಾಸಗಿ ಸಂಘ ಸಂಸ್ಥೆಗಳಿಗೆ ಸಮಾರಂಭ ನಡೆಸಲು ಮೈಸೂರು ವಿಶ್ವವಿದ್ಯಾನಿಲಯದವರು ಅವಕಾಶ ನೀಡುತ್ತಿದ್ದು, ಸಮಾರಂಭ ಮುಗಿದ ನಂತರ ಕುಡಿಯುವ ನೀರಿನ ಬಾಟಲಿ ಹಾಗೂ ಊಟ, ತಿಂಡಿಯ ಪ್ಲೇಟ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಕ್ರೀಡಾಂಗಣದಲ್ಲಿ ಕಸದ ರಾಶಿಯೇ ನಿರ್ಮಾಣವಾಗುತ್ತವೆ. ಸಂಬಂಧಪಟ್ಟವರು ಕ್ರೀಡಾಂಗಣದ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು.
-ವಿಜಯಕಾಂತ್, ಮೈಸೂರು





