Andolana originals

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ವಾಯುವಿಹಾರಕ್ಕೆ ಬರುತ್ತಾರೆ.

ಕ್ರೀಡಾಂಗಣದಲ್ಲಿ ವಿಶ್ರಮಿಸಲು ಅಲ್ಲಲ್ಲಿ ಕಾಂಕ್ರೀಟ್ ಬೆಂಚ್‌ಗಳನ್ನು ಹಾಕಲಾಗಿದ್ದು, ಕೆಲವು ಬೆಂಚ್‌ಗಳು ಮುರಿದು ಹೋಗಿ ವರ್ಷಗಳೇ ಕಳೆದರೂ ಸಂಬಂಧಪಟ್ಟವರು ಹೊಸದಾಗಿ ಬೆಂಚ್‌ಗಳನ್ನು ಅಳವಡಿಸಿಲ್ಲ. ಕ್ರೀಡಾಂಗಣದಲ್ಲಿ ಖಾಸಗಿ ಸಂಘ ಸಂಸ್ಥೆಗಳಿಗೆ ಸಮಾರಂಭ ನಡೆಸಲು ಮೈಸೂರು ವಿಶ್ವವಿದ್ಯಾನಿಲಯದವರು ಅವಕಾಶ ನೀಡುತ್ತಿದ್ದು, ಸಮಾರಂಭ ಮುಗಿದ ನಂತರ ಕುಡಿಯುವ ನೀರಿನ ಬಾಟಲಿ ಹಾಗೂ ಊಟ, ತಿಂಡಿಯ ಪ್ಲೇಟ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಕ್ರೀಡಾಂಗಣದಲ್ಲಿ ಕಸದ ರಾಶಿಯೇ ನಿರ್ಮಾಣವಾಗುತ್ತವೆ. ಸಂಬಂಧಪಟ್ಟವರು ಕ್ರೀಡಾಂಗಣದ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು.

-ವಿಜಯಕಾಂತ್, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

21 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

21 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago