ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ನಳಪಾಕ್ ರೆಸ್ಟೋರೆಂಟ್ ಮುಂಭಾಗದಲ್ಲಿರುವ ಯುಜಿಡಿ ಪೈಪ್ ಒಡೆದು ಹೋಗಿದ್ದು, ರಸ್ತೆಯ ಮೇಲೆಲ್ಲಾ ಕೊಳಚೆ ನೀರು ಹರಿದು ದುರ್ವಾಸನೆ ಬೀರುತ್ತಿದೆ.
ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಯುಜಿಡಿ ಪೈಪ್ ಲೈನ್ ದುರಸ್ತಿಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





