ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ ಪರಿಶಿಷ್ಟ ಜಾತಿಯ ೧೨ಜನ ರೈತರಿಗೆ ಜಮೀನನ್ನು ಮಂಜೂರು ಮಾಡಲಾಗಿತ್ತು. ನೀರಿನ ಕೊರತೆ ಹಾಗೂ ಮಳೆಯ ಅಭಾವದಿಂದ ನಾಲ್ಕಾರು ವರ್ಷ ರೈತರು ೩೬ ಎಕರೆ ಪ್ರದೇಶದಲ್ಲಿ ವ್ಯವಸಾಯ ಮಾಡದೇ ಖಾಲಿ ಬಿಟ್ಟಿದ್ದರು.
ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಒಂದಿಬ್ಬರು ಅನಧಿಕೃತವಾಗಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದಾರೆ. ಮೂಲ ಮಂಜೂರಾತಿದಾರರು ವ್ಯವಸಾಯ ಮಾಡಲು ಹೋದಾಗ ದಬ್ಬಾಳಿಕೆಯಿಂದ ಜಮೀನನ್ನು ಬಿಟ್ಟುಕೊಡದೆ ವ್ಯವಸಾಯ ಮಾಡುತ್ತಿರುತ್ತಾರೆ. ಸದರಿ ಜಮೀನನ್ನು ಮೂಲ ಮಂಜೂರಾತಿದಾರರಿಗೆ ಹಿಂದಿರುಗಿಸಲು ಕ್ರಮ ಕೈಗೊಳ್ಳುವಂತೆ ಕೊಳ್ಳೇಗಾಲ ಉಪವಿಭಾಗಾಧಿಕಾರಿಯವರು ಆದೇಶ ನೀಡಿದ್ದು, ಸದರಿ ಆದೇಶದಂತೆ ಕ್ರಮ ಕೈಗೊಳ್ಳದೆ ಕಂದಾಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈ ಬಗ್ಗೆ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿಗಳು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಈಗಲಾದರೂ ಭೂಮಿಯಲ್ಲಿ ಅಕ್ರಮವಾಗಿ ಸಾಗುವಳಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕಾಗಿದೆ.
-ಆರ್.ಮಹದೇವಯ್ಯ, ಆಲೂರು ಗ್ರಾಮ, ಚಾ.ನಗರ ತಾ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…
ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ…
ಬೆಂಗಳೂರು : ಉದ್ಯೋಗ ಮಾಡುವ ಮಹಿಳೆಯರಿಗೆ ಅತ್ಯುತ್ತಮ ನಗರ ಎಂಬ ಕೀರ್ತಿ ಬೆಂಗಳೂರಿಗೆ ಸಿಕ್ಕಿದೆ. ಮುಂಬೈ, ಚೆನ್ನೈ ಸೇರಿದಂತೆ 16…