Mysore
29
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

dgp murder case

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹೊರೆಯಾಗುತ್ತಿದೆ.

ಆಸ್ತಿ ತೆರಿಗೆ ರಾಜ್ಯಾದ್ಯಂತ ಏಕರೂಪದಲ್ಲಿ ಇಲ್ಲದೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಟ್ಟಡಗಳ ಮಾಲೀಕರಿಗೆ ಆಸ್ತಿ ತೆರಿಗೆಯೊಂದಿಗೆ ವಿವಿಧ ಸೆಸ್‌ಗಳನ್ನು ಹಾಕುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ತೆರಿಗೆ ದರ ದುಪ್ಪಟ್ಟಾಗುತ್ತಿದೆ. ರಾಜ್ಯ ಸರ್ಕಾರ ಕೂಡಲೇ ರಾಜ್ಯಾದ್ಯಂತ ಏಕರೂಪದ ಆಸ್ತಿ ತೆರಿಗೆಯನ್ನು ಜಾರಿಗೆ ತರಬೇಕು ಹಾಗೂ ಮಾಲೀಕರಿಗೆ ಹೊರೆಯಾಗದಂತೆ ಐದು ವರ್ಷಗಳಿಗೊಮ್ಮೆ ತೆರಿಗೆಯನ್ನುಪರಿಷ್ಕರಣೆ ಮಾಡುವುದು ಅಗತ್ಯ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

Tags:
error: Content is protected !!