ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡಿರುವ ವಿಚಾರ ತೀವ್ರ ಗೊಂದಲ ಸೃಷ್ಟಿಸಿದ್ದು, ಬಡ ಜನರ ಆತಂಕಕ್ಕೆ ಕಾರಣವಾಗಿದೆ. ಆದಾಯ ಪಾವತಿಸುತ್ತಿದ್ದಾರೆ, ಬಡತನ ರೇಖೆಗಿಂತ ಮೇಲಿದ್ದಾರೆ ಎಂಬ ಕಾರಣಗಳನ್ನು ನೀಡಿ ರಾಜ್ಯ ಸರ್ಕಾರ 22 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ನಾವು ಅನರ್ಹ ಕಾರ್ಡುಗಳನ್ನು ಮಾತ್ರ ರದ್ದು ಮಾಡಿದ್ದೇವೆ, ಅರ್ಹ ಫಲಾನುಭವಿಗಳ ಬಿಪಿಎಲ್ ಪಡಿತರ ಚೀಟಿಗಳು ಮುಂದುವರಿಲಿವೆ, ಬಡ ವರ್ಗದ ಜನರಿಗೆ ಯಾವುದೇ ರೀತಿಯ ಮೋಸವಾಗುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ ಫಲಾನುಭವಿಗಳನ್ನು ಪರಿಷ್ಕರಣೆ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಪಡಿತರ ಚೀಟಿಗಳನ್ನು ರದ್ದು ಮಾಡಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರೊಂದಿಗೆ ಆಧಾರ್ ಕಾರ್ಡ್ ದೃಢೀಕರಣ ಮಾಡದ ಅನೇಕ ಎಪಿಎಲ್ ಕಾರ್ಡ್‌ಗಳನ್ನೂ ರದ್ದು ಮಾಡಲಾಗಿದೆ.
ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಜನರು ಕೇವಲ ಯಾತರಕ್ಕಾಗಿ ಮಾತ್ರವಲ್ಲದೆ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಆಯುಷ್ಮಾನ್ ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ಪಡೆದುಕೊಳ್ಳಲು ಬಳಸುತ್ತಾರೆ. ಆದರೆ ಸರ್ಕಾರ ತೆರಿಗೆ ಪಾವತಿಸುತ್ತಾರೆ ಎಂದು ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದರೆ ಅವರು ಪಡಿತರದ ಜತೆಗೆ ಅನೇಕ ಸೌಲಭ್ಯಗಳಿಂದಲೂ ವಂಚಿತರಾಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಮರುಪರಿಶೀಲಿಸಬೇಕಿದೆ.
-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ…
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…
ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…