ಓದುಗರ ಪತ್ರ
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ ಕೆಲವು ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂಭಾಗ ಸಾರ್ವಜನಿಕರು ಓಡಾಡುವ ಮುಖ್ಯ ರಸ್ತೆಯ ಪಾರ್ಕಿಂಗ್ ರಸ್ತೆಯಲ್ಲೇ ಕಬ್ಬಿಣದ ಬಾಕ್ಸ್‌ಗಳನ್ನು ಹಾಕಿದ್ದಾರೆ. ಕೆಲವು ವ್ಯಾಪಾರಿಗಳಂತೂ ತಮ್ಮ ಅಂಗಡಿಗಳ ಮುಂದೆ ಯಾವುದೇ ವಾಹನಗಳನ್ನು ನಿಲುಗಡೆ ಮಾಡಲು ಬಿಡುವುದಿಲ್ಲ. ಸಾರ್ವಜನಿಕರು ಪಾರ್ಕಿಂಗ್ ಮಾಡಲು ಹೋದರೆ, ಅಂಗಡಿ ಮಾಲೀಕರು ಜಗಳಕ್ಕೆ ಬರುತ್ತಾರೆ, ಅಂಗಡಿಯ ಮುಂದಿನ ಜಾಗ ನಮಗೆ ಸೇರಿದ್ದು ಎಂದು ವಾದಿಸುತ್ತಾರೆ, ಈ ವಿಚಾರವನ್ನು ಅಲ್ಲಿನ ಟ್ರಾಫಿಕ್ ಪೊಲೀಸರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಿ, ಅಂಗಡಿ ಮುಂದಿನ ರಸ್ತೆಯಲ್ಲಿ ಅಕ್ರಮವಾಗಿ ಹಾಕಿರುವ ಕಬ್ಬಿಣದ ಬಾಕ್ಸ್‌ಗಳನ್ನು ತೆರವುಗೊಳಿಸಿ ಸಾರ್ವಜನಿಕರ ವಾಹನ ನಿಲುಗಡೆಗೆ ಅನುಕೂಲ ಕಲ್ಪಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…