ಓದುಗರ ಪತ್ರ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ ಡಿಎಲ್)(ಮೈಸೂರು ಸ್ಯಾಂಡಲ್ ಸೋಪು) ೨೦೨೪-೨೫ನೇ ಸಾಲಿನಲ್ಲಿ ಗಳಿಸಿದ ೪೫೧ ಕೋಟಿ ರೂ. ಲಾಭದಲ್ಲಿ ಶೇ.೩೦ರಷ್ಟು ಲಾಭಾಂಶದ ಬಾಬ್ತು ೧೩೫ ಕೋಟಿ ರೂ.ಗಳ ಚೆಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿರುವುದು ಶ್ಲಾಘನೀಯ.
ವರ್ಷದಿಂದ ವರ್ಷಕ್ಕೆ ಕೆಎಸ್ ಡಿಎಲ್‌ನ ಲಾಭ ಗಳಿಕೆ ಹೆಚ್ಚುತ್ತಾ ಸಾಗಿರುವುದು ಉತ್ತಮ ಬೆಳವಣಿಗೆ. ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ಸಿಲ್ಕ್ಸ್ , ಮೈಸೂರು ಸ್ಯಾಂಡಲ್ ಸೋಪು, ಮೈಸೂರು ಲ್ಯಾಂಪ್ಸ್, ಮೈಸೂರು ಪೇಪರ್ ಮಿಲ್ಸ್‌ನ ಉತ್ಪನ್ನಗಳನ್ನು ಕಡ್ಡಾಯವಾಗಿ ಉಳಿದ ಸರಕಾರಿ ಸಂಸ್ಥೆಗಳು ಖರೀದಿಸಬೇಕು ಎಂದು ಆದೇಶ ಹೊರಡಿಸುವ ಮೂಲಕ ಲಾಭದಾಯಕವಾಗಿಸಲು ನಿಯಮವನ್ನು ರೂಪಿಸಿದ್ದರು. ಸಾರ್ವಜನಿಕ ರಂಗದ ಈ ಉದ್ದಿಮೆಗಳು ಲಾಭದಲ್ಲೇ ಇದ್ದವು. ನಂತರ ಬಂದ ಜನಪ್ರತಿನಿಧಿಗಳ ಸರ್ಕಾರಗಳು ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಟ್ಟು ಸಾರ್ವಜನಿಕ ರಂಗದ ಉದ್ದಿಮೆಗಳನ್ನು ನಿರ್ಲಕ್ಷಿಸಿದ್ದರಿಂದ ಮೈಸೂರು ಲ್ಯಾಂಪ್ಸ್, ಮೈಸೂರು ಪೇಪರ್ ಮಿಲ್ಸ್ ಮುಚ್ಚಿ ಹೋಗಿವೆ. ಮಹಾರಾಜರ ಮಹಾತ್ವಾಕಾಂಕ್ಷೆಯ ಉದ್ದಿಮೆಗಳಾದ ಮೈಸೂರು ಸ್ಯಾಂಡಲ್ (ಕೆಎಸ್‌ಡಿಎಲ್), ಮೈಸೂರು ಸಿಲ್ಕ್ಸ್ ಗಳನ್ನು ಸರ್ಕಾರ ಉಳಿಸಲು ಕ್ರಮ ಕೈಗೊಳ್ಳುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…