Andolana originals

ಓದುಗರ ಪತ್ರ: ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಉಳಿಸಿ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ ಡಿಎಲ್)(ಮೈಸೂರು ಸ್ಯಾಂಡಲ್ ಸೋಪು) ೨೦೨೪-೨೫ನೇ ಸಾಲಿನಲ್ಲಿ ಗಳಿಸಿದ ೪೫೧ ಕೋಟಿ ರೂ. ಲಾಭದಲ್ಲಿ ಶೇ.೩೦ರಷ್ಟು ಲಾಭಾಂಶದ ಬಾಬ್ತು ೧೩೫ ಕೋಟಿ ರೂ.ಗಳ ಚೆಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿರುವುದು ಶ್ಲಾಘನೀಯ.

ವರ್ಷದಿಂದ ವರ್ಷಕ್ಕೆ ಕೆಎಸ್ ಡಿಎಲ್‌ನ ಲಾಭ ಗಳಿಕೆ ಹೆಚ್ಚುತ್ತಾ ಸಾಗಿರುವುದು ಉತ್ತಮ ಬೆಳವಣಿಗೆ. ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಮೈಸೂರು ಸಿಲ್ಕ್ಸ್ , ಮೈಸೂರು ಸ್ಯಾಂಡಲ್ ಸೋಪು, ಮೈಸೂರು ಲ್ಯಾಂಪ್ಸ್, ಮೈಸೂರು ಪೇಪರ್ ಮಿಲ್ಸ್‌ನ ಉತ್ಪನ್ನಗಳನ್ನು ಕಡ್ಡಾಯವಾಗಿ ಉಳಿದ ಸರಕಾರಿ ಸಂಸ್ಥೆಗಳು ಖರೀದಿಸಬೇಕು ಎಂದು ಆದೇಶ ಹೊರಡಿಸುವ ಮೂಲಕ ಲಾಭದಾಯಕವಾಗಿಸಲು ನಿಯಮವನ್ನು ರೂಪಿಸಿದ್ದರು. ಸಾರ್ವಜನಿಕ ರಂಗದ ಈ ಉದ್ದಿಮೆಗಳು ಲಾಭದಲ್ಲೇ ಇದ್ದವು. ನಂತರ ಬಂದ ಜನಪ್ರತಿನಿಧಿಗಳ ಸರ್ಕಾರಗಳು ಈ ನಿಯಮವನ್ನು ಗಾಳಿಗೆ ತೂರಿ ಖಾಸಗಿ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಟ್ಟು ಸಾರ್ವಜನಿಕ ರಂಗದ ಉದ್ದಿಮೆಗಳನ್ನು ನಿರ್ಲಕ್ಷಿಸಿದ್ದರಿಂದ ಮೈಸೂರು ಲ್ಯಾಂಪ್ಸ್, ಮೈಸೂರು ಪೇಪರ್ ಮಿಲ್ಸ್ ಮುಚ್ಚಿ ಹೋಗಿವೆ. ಮಹಾರಾಜರ ಮಹಾತ್ವಾಕಾಂಕ್ಷೆಯ ಉದ್ದಿಮೆಗಳಾದ ಮೈಸೂರು ಸ್ಯಾಂಡಲ್ (ಕೆಎಸ್‌ಡಿಎಲ್), ಮೈಸೂರು ಸಿಲ್ಕ್ಸ್ ಗಳನ್ನು ಸರ್ಕಾರ ಉಳಿಸಲು ಕ್ರಮ ಕೈಗೊಳ್ಳುವುದು ಅಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago