ಓದುಗರ ಪತ್ರ
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ. ಮೂಲದ ಕಸ ಬೇರ್ಪಡಿಸದಿದ್ದರೆ ಈ ಬೃಹತ್ ಘಟಕಗಳು ಯಶಸ್ವಿಯಾಗಲು ಸಾಧ್ಯವೇ ಇಲ್ಲ. ಕೇವಲ ದೊಡ್ಡ ಯಂತ್ರಗಳನ್ನು ಉಪಯೋಗಿಸುವ ಬದಲು ಪ್ರತಿ ವಾರ್ಡ್ ಮಟ್ಟದಲ್ಲಿ ಸಣ್ಣ ಪ್ರಮಾಣದ ಜೈವಿಕ ಅನಿಲ ಘಟಕಗಳನ್ನು ಸ್ಥಾಪಿಸುವುದು ಹೆಚ್ಚು ಪ್ರಾಯೋಗಿಕ. ಕಸ ಸರಿಯಾಗಿ ವಿಂಗಡಿಸದ ನಾಗರಿಕರಿಗೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ದಂಡ ವಿಧಿಸುವ ಬಿಗಿ ನಿಯಮ ತರಬೇಕು. ಜೊತೆಗೆ ಕಸ ಸಾಗಣೆ ವಾಹನಗಳಿಗೆ ಜಿಪಿಎಸ್ ಮತ್ತು ಸ್ಮಾರ್ಟ್ ಸೆನ್ಸರ್ ಗಳನ್ನು ಅಳವಡಿಸಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸುವುದು ಅತ್ಯಗತ್ಯ. ಕಸವನ್ನು ಕೇವಲ ಸುಟ್ಟು ಹಾಕಿ ವಿದ್ಯುತ್ ಉತ್ಪಾದನೆ ಬದಲು ಮರುಬಳಕೆ ಮತ್ತು ವೈeನಿಕ ಪುನರಾವರ್ತನೆಯ ಕ್ರಾಂತಿಕಾರಿ ಮಾದರಿಗಳನ್ನು ಅನುಸರಿಸದಿದ್ದರೆ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತದೆ. ಅಧಿಕಾರಶಾಹಿಗಳು ಎಚ್ಚೆತ್ತುಕೊಂಡು ಜವಾಬ್ದಾರಿಯುತ ಹೆಜ್ಜೆ ಇಡಬೇಕಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…