ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ ಸ್ವಾತಂತ್ರ ದೊರಕಲು ಸಹಾಯ ಮಾಡಿದ, ಭಾರತದ ಉಪಕಾರ ಸ್ಮರಣೆಯನ್ನು ಮರೆತ ಬಾಂಗ್ಲಾ ದೇಶದ ಪ್ರಜೆಗಳು ಹಾಗೂ ಅಲ್ಲಿನ ಸರ್ಕಾರದ ನೀಚತನವನ್ನು ಖಂಡಿಸಲೇಬೇಕು.
ಬಾಂಗ್ಲಾ ದೇಶದ ಅಕ್ರಮ ವಲಸಿಗರು ಭಾರತದಲ್ಲಿ ರೇಷನ್ ಕಾರ್ಡ್, ಆಧಾರ್ ಕಾರ್ಡ್‌ಗಳನ್ನು ಸುಲಭವಾಗಿ ಮಾಡಿಸಿಕೊಂಡು ಎಲ್ಲಾ ಸರ್ಕಾರಿ ಸವಲತ್ತುಗಳನ್ನು ಉಚಿತವಾಗಿ ಪಡೆಯುತ್ತಿರುವುದು ವಿಪರ್ಯಾಸವೇ ಸರಿ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೂಡಲೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಿ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು


