Andolana originals

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಪಾಸಾಗಲು ಶೇ. ೩೩ ಅಂಕ ನಿಗದಿ ಸರಿಯಲ್ಲ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ಶೇ೩೩ ಅಂಕಗಳು ಸಾಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕಡಿಮೆ ಅಂಕ ಪಡೆದು ಪಾಸ್ ಆಗಬಹುದು ಎಂಬ ಮನೋಭಾವ ಬರುವಂತೆ ಪ್ರೇರೇಪಿಸುತ್ತದೆ. ನಿರಂತರ ಅಧ್ಯಯನಕ್ಕೆ ಮತ್ತು ಮಕ್ಕಳು ಓದಿನಲ್ಲಿ ತೊಡಗಿಸಿಕೊಳ್ಳುವುದಕ್ಕೆ ಉದಾಸೀನತೆ ಉಂಟಾಗಲು ಕಾರಣವಾಗುತ್ತದೆ.

ಹಾಗಾಗಿ ಇಂತಹ ನಿರ್ಧಾರಗಳನ್ನು ಮಕ್ಕಳ ಮಾನಸಿಕ ವಿಕಸನದ ದೃಷ್ಟಿಯಿಂದ ಮರುಪರಿಶೀಲಿಸಬೇಕು. ಅನುದಾನಿತ ಶಾಲೆಗಳಲ್ಲಿ ಒಂದರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಅಥವಾ ಎರಡು ತರಗತಿಗಳು ಮೌಲ್ಯಯುತ ಶಿಕ್ಷಣವನ್ನು ನೀಡಲಾಗುವುದು ಎಂದು ಸಚಿವರು ಹೇಳಿರುವುದು ಸ್ವಾಗತಾರ್ಹ. ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಹೆಚ್ಚಾಗಲಿ. ಆದರೆ ಶೇ.೩೩ಅಂಕಕ್ಕೇ ಮುಂದಿನ ತರಗತಿಗೆ ತೇರ್ಗಡೆ ಮಾಡುವುದು ಸರಿಯಾದ ಕ್ರಮವಲ್ಲ

-ಪಿ.ಸಿ. ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು ಜನತೆಗೆ ನೀರಿನ ಕರ ಏರಿಕೆಯ ಬರೆ

ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…

1 min ago

ಇಂದಿನಿಂದ ಸ್ವಯಂ ಗಣತಿ

ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ  ಬೆಂಗಳೂರು: ರಾಷ್ಟ್ರೀಯ ಜನಗಣತಿ…

9 mins ago

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…

14 mins ago

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

10 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

13 hours ago