ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಸೀತಾ ರಾಘವ ವೈದ್ಯಶಾಲಾ ಪಕ್ಕದ ಗಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ ವಾಗಿದೆ.
ಈ ರಸ್ತೆಯು ಹಾರ್ಡ್ವಿಕ್ ಕಾಲೇಜಿಗೆ ಸಂಪರ್ಕ ಕಲ್ಪಿಸುತ್ತಿದ್ದು, ನೂರಾರು ಜನರು ಇಲ್ಲಿ ಓಡಾಡು ತ್ತಾರೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆಯ ಮೇಲೆ ಚರಂಡಿ ನೀರು ಹರಿಯುವುದನ್ನು ತಡೆಗಟ್ಟುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
– ಲೀಲಾ ಮೂರ್ತಿ, ಮೈಸೂರು





