ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಅವರ ಕೃತ್ಯ ಹೇಯವಾದುದು. ಘಟನೆಯ ನಂತರ ಇದರಿಂದ ನಾನು ವಿಚಲಿತ ನಾಗಿಲ್ಲ.ನನ್ನ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಇದನ್ನು ನಿರ್ಲಕ್ಷಿಸ ಬೇಡಿ, ವಕೀಲನಿಗೆ ಎಚ್ಚರಿಕೆ ಕೊಟ್ಟು ಕಳಿಸಿ ಕೊಡಿ ಎಂದು ಅವರು ಹೇಳಿದ್ದಾರೆ. ಆದ ಕಾರಣ ಆತನ ವಿರುದ್ಧ ದೂರು ದಾಖಲಾಗಿಲ್ಲ. ಇದೊಂದು ಖಂಡನಾರ್ಹ ಕೃತ್ಯ ಇದನ್ನು ಯಾರೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಸಂಬಂಧಪಟ್ಟವರು ಇನ್ನು ಮುಂದಾದರೂ ಇಂತಹ ಘಟನೆಗಳು ಘಟಿಸದಂತೆ ಎಚ್ಚರಿಕೆ ವಹಿಸುವುದು ಅಗತ್ಯ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು





