Andolana originals

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ ಯಾವುದೇ ಮುನ್ಸೂಚನೆ ಇಲ್ಲದೇ ಕೆಎಂಎಫ್ ಹೆಚ್ಚು ಮಾಡಿದೆ. ಇದು ಮಧ್ಯಮ ವರ್ಗದ ಗ್ರಾಹಕರ ಮೇಲೆ ಹೇರಿದ ಹೆಚ್ಚಿನ ಹೊರೆ.ಬಹುತೇಕ ಮಧ್ಯಮ ವರ್ಗದ ಜನರು ನಂದಿನಿ ಉತ್ಪನ್ನಗಳನ್ನೇ ಬಳಸುತ್ತಾರೆ. ಈಗ ಬೆಲೆ ಏರಿಕೆಯಿಂದ ಈ ವರ್ಗದ ಜನರು ತುಪ್ಪ ತಿನ್ನುವ ಬಗ್ಗೆ ಸ್ವಲ್ಪ ಯೋಚಿಸಬೇಕಾಗುತ್ತದೆ. ತುಪ್ಪ ತಿನ್ನುವ ಅನಿವಾರ್ಯತೆ ಇದ್ದರೆ ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವಂತಹ ನಾಣ್ಣುಡಿ ಈಗ ಹೆಚ್ಚು ಪ್ರಸ್ತುತವಾಗುತ್ತಿದೆ ಎಂದು ಅನಿಸುತ್ತದೆ. ಗಮನಿಸಬೇಕಾದ ಸಂಗತಿ ಎಂದರೆ, ಕಳೆದ ನವೆಂಬರ್ ತಿಂಗಳಲ್ಲಿ ಕೆಎಂಎಫ್ ತುಪ್ಪ ಮತ್ತು ಬೆಣ್ಣೆ ಉತ್ಪನ್ನಗಳ ಬೆಲೆಯನ್ನು ಶೇ. ೬ ರಷ್ಟು ಏರಿಕೆ ಮಾಡಿತ್ತು. ಅಂದರೆ ಕಳೆದ ಆರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಈ ಎರಡು ನಂದಿನಿ ಉತ್ಪನ್ನಗಳನ ಬೆಲೆಯನ್ನು ಏರಿಕೆ ಮಾಡಿದೆ. ಜನ ಸಾಮಾನ್ಯರ ಬಗ್ಗೆ ತೀವ್ರ ಕಾಳಜಿ ವಹಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತುಪ್ಪದ ವಿಷಯಕ್ಕಿಂತ ಬೇರೆ ವಿಷಯಗಳ ಬಗ್ಗೆ ತಲೆಕೆಡಿಸಿಕೊಂಡಂತೆ ಇದೆ!

 -ಬೂಕನಕೆರೆ ವಿಜೇಂದ್ರ , ಮೈಸೂರು

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

28 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago