ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಗೆ ಈ ವರ್ಷ ಶತಮಾನೋತ್ಸವದ ಸಂಭ್ರಮಾಚರಣೆಯಾಗಿದೆ. ನಾಡು, ನುಡಿ, ಸಂಸ್ಕೃತಿ ಸಾರುವ ಈ ನಾಡಗೀತೆಯನ್ನು ಕೇವಲ ಸರ್ಕಾರಿ ಶಾಲೆಗಳಲ್ಲದೆ ರಾಜ್ಯದ ಎಲ್ಲಾ ಖಾಸಗಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿಯೂ ಕಡ್ಡಾಯಗೊಳಿಸಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು, ನುಡಿಯ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು.
ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು





