Mysore
17
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಓದುಗರ ಪತ್ರ: ಹಾಸನಾಂಬೆ ದರ್ಶನಕ್ಕೆ ಸುಗಮ ವ್ಯವಸ್ಥೆ ಶ್ಲಾಘನೀಯ

ಓದುಗರ ಪತ್ರ

ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ ಅನೇಕ ಕ್ರಮಗಳನ್ನು ಕೈಗೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಕಳೆದ ವರ್ಷ ಉಂಟಾದ ಅವ್ಯವಸ್ಥೆಯಿಂದಾಗಿ ವಿಐಪಿ ಸಂಸ್ಕೃತಿ ಹಾಗೂ ಜಿಲ್ಲಾಡಳಿತದ ವಿರುದ್ಧ ಜನರು ಛೀಮಾರಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ ಈ ಬಾರಿ ಅಗತ್ಯ ಕ್ರಮ ವಹಿಸಲಾಗಿದ್ದು, ೩೦೦ ರೂ. ಮತ್ತು ೧,೦೦೦ ರೂ.ಗಳ ಟಿಕೆಟ್ಗಳನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಬೇಗ ದರ್ಶನವಾಗುತ್ತಿದೆ. ಅದೇ ರೀತಿ ಮೂರು ಅಥವಾ ನಾಲ್ಕು ಗಂಟೆಗಳ ಒಳಗೆ ಭಕ್ತರಿಗೆ ಧರ್ಮ ದರ್ಶನವಾಗುತ್ತಿದೆ.

ಜಿಲ್ಲಾಡಳಿತದಿಂದ ವಿಐಪಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಹಾಸನಾಂಬೆ ದೇವಾಲಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಪ್ರತ್ಯೇಕವಾದ ಗುರುತಿನ ಚೀಟಿ ನೀಡಲಾಗಿದ್ದು, ಅದರ ದುರುಪ ಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಪರಿಶೀಲಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಸನಾಂಬೆಯ ದರ್ಶನ ಮಾಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳು.

-ಪಿ.ಎನ್. ಪರಶಿವಮೂರ್ತಿ , ನಂಜೀಪುರ, ಸರಗೂರು ತಾ.

Tags:
error: Content is protected !!