Andolana originals

ಓದುಗರ ಪತ್ರ: ಹಾಸನಾಂಬೆ ದರ್ಶನಕ್ಕೆ ಸುಗಮ ವ್ಯವಸ್ಥೆ ಶ್ಲಾಘನೀಯ

ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ ಅನೇಕ ಕ್ರಮಗಳನ್ನು ಕೈಗೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಕಳೆದ ವರ್ಷ ಉಂಟಾದ ಅವ್ಯವಸ್ಥೆಯಿಂದಾಗಿ ವಿಐಪಿ ಸಂಸ್ಕೃತಿ ಹಾಗೂ ಜಿಲ್ಲಾಡಳಿತದ ವಿರುದ್ಧ ಜನರು ಛೀಮಾರಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ದರಿಂದ ಈ ಬಾರಿ ಅಗತ್ಯ ಕ್ರಮ ವಹಿಸಲಾಗಿದ್ದು, ೩೦೦ ರೂ. ಮತ್ತು ೧,೦೦೦ ರೂ.ಗಳ ಟಿಕೆಟ್ಗಳನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಬೇಗ ದರ್ಶನವಾಗುತ್ತಿದೆ. ಅದೇ ರೀತಿ ಮೂರು ಅಥವಾ ನಾಲ್ಕು ಗಂಟೆಗಳ ಒಳಗೆ ಭಕ್ತರಿಗೆ ಧರ್ಮ ದರ್ಶನವಾಗುತ್ತಿದೆ.

ಜಿಲ್ಲಾಡಳಿತದಿಂದ ವಿಐಪಿಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸಲಾಗಿದೆ. ಹಾಸನಾಂಬೆ ದೇವಾಲಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಪ್ರತ್ಯೇಕವಾದ ಗುರುತಿನ ಚೀಟಿ ನೀಡಲಾಗಿದ್ದು, ಅದರ ದುರುಪ ಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಪರಿಶೀಲಿಸಿ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಸನಾಂಬೆಯ ದರ್ಶನ ಮಾಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳು.

-ಪಿ.ಎನ್. ಪರಶಿವಮೂರ್ತಿ , ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

7 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

7 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

7 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

7 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

8 hours ago