ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಹೆಚ್ಚಾಗುತ್ತಿದ್ದು, ಪಡಿತರ ಪಡೆಯಲು ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಗಳನ್ನು ಬಿಟ್ಟು ದಿನಪೂರ್ತಿ ನ್ಯಾಯಬೆಲೆ ಅಂಗಡಿಯ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ.
ಗ್ರಾಮೀಣ ಭಾಗಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವ ಸಮಸ್ಯೆ ಹೆಚ್ಚಾಗಿದ್ದು, ಜನರು ಪಡಿತರ ಪಡೆಯಲು ನಿತ್ಯ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಗ್ರಾಮೀಣ ಭಾಗದ ಬಹುತೇಕ ಜನರು ಕೂಲಿ ಕೆಲಸ, ಕೃಷಿಯನ್ನು ಆಧರಿಸಿ ಜೀವನ ಸಾಗಿಸುತ್ತಿದ್ದಾರೆ, ನಿತ್ಯ ದುಡಿದರೆ ಮಾತ್ರ ಅವರ ಜೀವನದ ಬಂಡಿ ಸಾಗುತ್ತದೆ.
ಹೀಗಾಗಿ ಬೆಳಿಗ್ಗೆಯೇ ಹೋಗಿ ಪಡಿತರ ತಂದು ನಂತರ ಕೆಲಸಕ್ಕೆ ಹೋಗುವ ಉದ್ದೇಶದಿಂದ ಅನೇಕ ಮಂದಿ ಬೆಳಿಗ್ಗೆ 8 ಗಂಟೆಗೇ ನ್ಯಾಯಬೆಲೆ ಅಂಗಡಿಗಳ ಮುಂದೆ ನಿಲ್ಲುತ್ತಾರೆ. ಆದರೆ ಇಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಅಕ್ಕಿ ಸಿಗುವುದು ತಡವಾಗುತ್ತಿದ್ದು, ಆ ದಿನದ ಕೆಲಸವನ್ನು ಕಳೆದುಕೊಳ್ಳುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಸಮಸ್ಯೆಯನ್ನು ಗಮನಹರಿಸಿ ಕೂಡಲೇ ಬಗೆಹರಿಸಬೇಕಿದೆ.
-ಕೆ.ಎಸ್.ಸುರೇಶ್, ಕೆ.ಜಿ.ಹಳ್ಳಿ, ಎಚ್.ಡಿ.ಕೋಟೆ ತಾ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…