ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ೮. ೦೦ ಗಂಟೆಯ ನಂತರ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಅಲ್ಲದೆ ಈ ನಾಯಿಗಳು ಬೈಕ್ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದು, ನಾಯಿಗಳಿಗೆ ಹೆದರಿ ಸವಾರರು ಬೈಕ್‌ಗಳನ್ನು ವೇಗವಾಗಿ ಓಡಿಸಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಇನ್ನು ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಈ ಬಡವಾಣೆಗಳಲ್ಲಿ ಆತಂಕದಿಂದಲೇ ಓಡಾಡುತ್ತಿದ್ದು, ಶಾಲೆಗೆ ಹೋಗುವ ಮಕ್ಕಳ ಮೇಲೆ ಈ ನಾಯಿಗಳು ದಾಳಿ ಮಾಡಬಹುದು ಎಂಬ ಆತಂಕ ಶುರುವಾಗಿದೆ. ಬೀದಿ ನಾಯಿಗಳಿಗೆ ಸರಿಯಾದ ರೀತಿಯಲ್ಲಿ ಸಂತಾನಹರಣ ಚಿಕಿತ್ಸೆ ಮಾಡದಿರುವುದೇ ನಾಯಿಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಲ್ಲದೆ ಅನೇಕ ಭಾಗಗಳಲ್ಲಿ ಮಾಂಸದಂಗಡಿಯವರು ಸರಿಯಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡದ ಪರಿಣಾಮ ನಿತ್ಯ ಮಾಂಸ ಸೇವಿಸುವ ಈ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿವೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಬೀದಿನಾಯಿಗಳಿಗೆ ಸರಿಯಾದ ಕ್ರಮದಲ್ಲಿ ಸಂತಾನಹರಣ ಚಿಕಿತ್ಸೆ ಮಾಡಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ…
ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ…
ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ…
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ…
ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ…