Andolana originals

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ೮. ೦೦ ಗಂಟೆಯ ನಂತರ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಅಲ್ಲದೆ ಈ ನಾಯಿಗಳು ಬೈಕ್ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದು, ನಾಯಿಗಳಿಗೆ ಹೆದರಿ ಸವಾರರು ಬೈಕ್‌ಗಳನ್ನು ವೇಗವಾಗಿ ಓಡಿಸಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಇನ್ನು ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಈ ಬಡವಾಣೆಗಳಲ್ಲಿ ಆತಂಕದಿಂದಲೇ ಓಡಾಡುತ್ತಿದ್ದು, ಶಾಲೆಗೆ ಹೋಗುವ ಮಕ್ಕಳ ಮೇಲೆ ಈ ನಾಯಿಗಳು ದಾಳಿ ಮಾಡಬಹುದು ಎಂಬ ಆತಂಕ ಶುರುವಾಗಿದೆ. ಬೀದಿ ನಾಯಿಗಳಿಗೆ ಸರಿಯಾದ ರೀತಿಯಲ್ಲಿ ಸಂತಾನಹರಣ ಚಿಕಿತ್ಸೆ ಮಾಡದಿರುವುದೇ ನಾಯಿಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಲ್ಲದೆ ಅನೇಕ ಭಾಗಗಳಲ್ಲಿ ಮಾಂಸದಂಗಡಿಯವರು ಸರಿಯಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡದ ಪರಿಣಾಮ ನಿತ್ಯ ಮಾಂಸ ಸೇವಿಸುವ ಈ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿವೆ. ಆದ್ದರಿಂದ ಮೈಸೂರು ಮಹಾನಗರ ಪಾಲಿಕೆಯವರು ಬೀದಿನಾಯಿಗಳಿಗೆ ಸರಿಯಾದ ಕ್ರಮದಲ್ಲಿ ಸಂತಾನಹರಣ ಚಿಕಿತ್ಸೆ ಮಾಡಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

14 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

14 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

14 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

14 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

15 hours ago