ಸೆಪ್ಟೆಂಬರ್ 5ರ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನವನ್ನು ‘ಶಿಕ್ಷಕರ ದಿನಾಚರಣೆ’ ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸೂಚಿಸಲಾಗುತ್ತಿದೆ.
ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು, ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಅವ ರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ.
ಅದೇ ರೀತಿ ಸರ್ಕಾರವೂ ಪ್ರತಿವರ್ಷ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಗಮನಾರ್ಹವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಅವರಿಗೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸರಿಯಷ್ಟೇ. ಆದರೆ ಶಿಕ್ಷಕರು ಇಂದಿಗೂ ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಪರಿಹರಿಸುವತ್ತ ಸರ್ಕಾರ ಗಮನಹರಿಸದಿರುವುದು ಬೇಸರದ ಸಂಗತಿ.
ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲ. ಕಟ್ಟಡಗಳು ಕುಸಿದು ಬೀಳುವ ಹಂತದಲ್ಲಿದ್ದರೂ ಶಿಕ್ಷಕರು ವಿಧಿ ಇಲ್ಲದೆ ಅದೇ ಸೂರಿನಡಿ ಮಕ್ಕಳಿಗೆ ಬೋಧನೆ ಮಾಡಬೇಕಿದೆ. ಕೆಲ ಶಿಕ್ಷಕರಿಗೆ ತಮ್ಮ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗವಿಲ್ಲ. ಜತೆಗೆ ಸರಿಯಾದ ಸಮಯಕ್ಕೆ ಮುಂಬಡ್ತಿ ಸಿಗದೆ ಹಾಗೂ ವೇತನವೂ ಹೆಚ್ಚಾಗದೆ ಅಲ್ಪ ಸಂಬಳದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಇನ್ನು ಗ್ರಾಮಾಂತರ ಭಾಗಗಳ ಹಲವಾರು ಹಳ್ಳಿಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಿದ್ದರೂ ಶಿಕ್ಷಕರು ಕಷ್ಟಪಟ್ಟು ಆ ಶಾಲೆಗಳನ್ನು ತಲುಪಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ. ಅಲ್ಲಿಯೇ ಉಳಿದುಕೊಂಡು ಕೆಲಸ ಮಾಡಲು ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ಇಷ್ಟೆಲ್ಲ ಸಮಸ್ಯೆಗಳ ಸುಳಿಯಲ್ಲಿ ಶಿಕ್ಷಕರು ಸಿಲುಕಿದ್ದರೂ ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಮಕ್ಕಳಿಗೆ ಪಾಠ ಮಾಡುತ್ತಿ ದ್ದಾರೆ. ಆದ್ದರಿಂದ ಸರ್ಕಾರ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿದರಷ್ಟೇ ಸಾಲದು ಅವರ ಸಮಸ್ಯೆಗಳನ್ನೂ ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…
ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…
ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ ಸಿದ್ದಾಪುರ:ಸಿದ್ದಾಪುರ ಪೊಲೀಸ್…
ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…