Mysore
22
haze

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಓದುಗರ ಪತ್ರ| ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಕಳೆದ ಸೋಮವಾರ (ಆಗಸ್ಟ್ 12) ಫ್ರೀಡಂ ಪಾರ್ಕ್ನಲ್ಲಿ ನಡೆಸಿದ ಬೆಂಗಳೂರು ಚಲೋ’ ಪ್ರತಿಭಟನೆಯಲ್ಲಿ ಸಾವಿರಾರು ಶಿಕ್ಷಕರು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದರು.

ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಗಸ್ಟ್ 17 ಅಥವಾ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಶಿಕ್ಷಕರ ಸಂಘವು, 2017ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪೂರ್ವಾನ್ವಯಗೊಳಿಸಬಾರದು, ಹಾಲಿ ಸೇವಾನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದನಾಮೀಕರಿಸಿ ವಿಲೀನಗೊಳಿಸಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಯಿಂದ ಮುಖ್ಯೋಪಾಧ್ಯಾಯರು ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಈ ಹಿಂದೆ ನೀಡುತ್ತಿದ್ದ ನಿಯಮಗಳ ಅನ್ವಯ ಬಡ್ತಿ ನೀಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

ಶಿಕ್ಷಕರ ಸಂಘವು ಕಳೆದ ಅನೇಕ ವರ್ಷಗಳಿಂದ ಈ ಬೇಡಿಕೆಯನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದು, ಸರ್ಕಾರ ಶಿಕ್ಷಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಲಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

Tags:
error: Content is protected !!