೧೧೦ ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಪ್ರಥಮವಿಶ್ವವಿದ್ಯಾನಿಲಯವಾದ ಮೈಸೂರು ವಿವಿ ಇಂದು ನಿವೃತ್ತಿ ಹೊಂದಿರುವ ತನ್ನ ನೌಕರರಿಗೆ ವೇತನ ಕೊಡದ ಸ್ಥಿತಿಗೆ ತಲುಪಿರುವುದು ಆತಂಕಕಾರಿ ಸಂಗತಿಯಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ೧,೯೦೦ ಪಿಂಚಣಿದಾರರಿದ್ದು, ಇವರು ನಿವೃತ್ತಿ ವೇತನವನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಸಕಾಲಕ್ಕೆ ಪಿಂಚಣಿ ದೊರೆಯದಿದ್ದರೆ ಈ ಹಿರಿಯ ನಾಗರಿಕರ ಪಾಡೇನು? ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು ಹಾಗೂ ಸರ್ಕಾರ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ನೌಕರರ ಪಿಂಚಣಿಗೆ ಸೂಕ್ತ ಅನುದಾನ ನೀಡುವ ಮೂಲಕ ಪಿಂಚಣಿದಾರರ ಸಮಸ್ಯೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





