Andolana originals

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ ಗೇಟ್ ಹಾಕಿದರೆ ಎಲ್ಲ ವಾಹನ ಸವಾರರೂ ಎಂ.ಜಿ.ಎಸ್. ರಸ್ತೆಯಲ್ಲಿ ಇರುವ ಅಂಡರ್ ಪಾಸ್ ಮೊರೆ ಹೋಗುತ್ತಾರೆ. ಆಗ ಪಟ್ಟಣದ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗುತ್ತದೆ. ಟ್ರಾಫಿಕ್ ಜಾಮ್ ಉಂಟಾದ ಸಂದರ್ಭದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಇರುವುದಿಲ್ಲ. ಆದ್ದರಿಂದ ರಸ್ತೆಯ ಎರಡೂ ಬದಿಗಳಿಂದ ಬರುವ ವಾಹನ ಸವಾರರು ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತದೆ. ಮತ್ತೆ ಸಂಚಾರ ಸುಗಮವಾಗಲು ಗಂಟೆಗಳ ಕಾಲ ಕಾಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಂಜನಗೂಡು ಟ್ರಾಫಿಕ್ ಪೊಲೀಸರು ಸಂಚಾರದಟ್ಟಣೆಯನ್ನು ನಿಯಂತ್ರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು

-ಕೀರ್ತಿರಾಜ್, ವಕ್ಕಲಗೇರಿ, ನಂಜನಗೂಡು

ಆಂದೋಲನ ಡೆಸ್ಕ್

Recent Posts

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

1 min ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

23 mins ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

4 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

4 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

4 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

4 hours ago