ಮೈಸೂರಿನ ಪರಸಯ್ಯನಹುಂಡಿ ವರ್ತುಲ ರಸ್ತೆಯ ವೃತ್ತದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿದೆ.
ಈ ಜಂಕ್ಷನ್‌ನಲ್ಲಿ ವಾಹನ ಹೆಚ್ಚಾಗಿರುವುದರಿಂದ ಸಿಗ್ನಲ್ ಅಳವಡಿಸಲಾಗಿದೆ. ದಟ್ಟಣೆ ಆದರೆ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್‌ಗಳು ಹಾಗೂ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳಲು ಸಿಗ್ನಲ್ ಪಕ್ಕದಲ್ಲೇ ನಿಲುಗಡೆ ನೀಡುತ್ತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ.
ಅಲ್ಲದೆ ಕೆಲ ಖಾಸಗಿ ವಾಹನಗಳು ಜನರನ್ನು ಹತ್ತಿಸಿಕೊಳ್ಳುವ ಸಲುವಾಗಿ ಸಿಗ್ನಲ್ ಸಮೀಪವೇ ರಸ್ತೆಯಲ್ಲಿ ಹೆಚ್ಚು ಸಮಯ ನಿಂತಿರುತ್ತವೆ. ಇದರಿಂದ ಹಿಂದೆ ಬರುವ ವಾಹನಗಳು ಮುಂದೆ ಸಂಚರಿಸಲು ಪರದಾಡುವಂತಾಗುತ್ತದೆ. ಜತೆಗೆ ಈ ವೃತ್ತದಿಂದ 100 ಮೀ. ಅಂತರದಲ್ಲಿಯೇ ಪೊಲೀಸ್ ಚೆಕ್ ಪೋಸ್ಟ್ ಇದ್ದರೂ ಇಲ್ಲಿನ ಟ್ರಾಫಿಕ್ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಪೊಲೀಸ್ ಚೆಕ್ ಪೋಸ್ಟ್ ಸಮೀಪದಲ್ಲಿಯೇ ಬಸ್ ನಿಲ್ದಾಣ ನಿರ್ಮಿಸಿ ಅಲ್ಲಿಯೇ ನಿಲುಗಡೆ ನೀಡುವಂತೆ ಮಾಡಬೇಕಿದೆ. ಇದರಿಂದ ವಾಹನ ದಟ್ಟಣೆಯೂ ಕಡಿಮೆಯಾಗಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗುತ್ತದೆ.
-ಮಂಜೇಶ್ ದೇವಗಳ್ಳಿ, ಮೈಸೂರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…