Mysore
28
haze

Social Media

ಶನಿವಾರ, 07 ಮಾರ್ಚ್ 2026
Light
Dark

ಓದುಗರ ಪತ್ರ: ನಿರುದ್ಯೋಗ ಸಮಸ್ಯೆ ನಿವಾರಿಸಿ

ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿಯಾಗಿದ್ದರೂ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿಲ್ಲ. ಇದರಿಂದಾಗಿ ವಯೋಮಿತಿ ಮೀರುತ್ತಿರುವವರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಹಾಗೂ ಹೊಸ ಉದ್ಯೋಗ ಸೃಷ್ಟಿಗೆ ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕು ಹಾಗೂ ಕೌಶಲಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು.

– ಎಲ್.ಎನ್.ಶಾನಿಕ, ಪತ್ರಿಕೋದ್ಯಮ ವಿಭಾಗ ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

Tags:
error: Content is protected !!