Andolana originals

ಓದುಗರ ಪತ್ರ| ‘ಕನ್ನಡ ಮಾತಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ’

‘ಕನ್ನಡದಲ್ಲಿ ಮಾತನಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಕರೆ ನೀಡಿದ್ದಾರೆ. ಇದು ತಮಾಷೆ ಅನಿಸಿದರೂ ಸತ್ಯವಾದ ಮಾತು.

ಬಹುತೇಕ ಆನ್‌ಲೈನ್ ಸ್ಯಾಮ್‌ಗಳ ಮೂಲ ಹಿಂದಿ ಭಾಷೆ ಮಾತನಾಡುವ ರಾಜ್ಯಗಳದ್ದಾಗಿದ್ದು, ಈ ಸ್ಯಾಮ್ ಮಾಡುವವರು ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ ಮಾತನಾಡುತ್ತಾರೆ. ಅವರಿಗೆ ಸ್ಪಂದಿಸಿದರೆ ಅವರು ಇನ್ನೂ ಉತ್ತೇಜಿತರಾಗಿ ತಮ್ಮ ಕುಕೃತ್ಯಗಳನ್ನು ಮುಂದುವರಿಸುತ್ತಾರೆ. ಇಂಗ್ಲಿಷ್ ಭಾಷೆಯಲ್ಲಿ ಉತ್ತರಿಸಿದರೆ ಸ್ವಲ್ಪ ತಡವರಿಸುತ್ತಾರೆ. ಒಂದು ವೇಳೆ ಕನ್ನಡದಲ್ಲಿ ಮಾತನಾಡಿದರೆ ಫೋನ್ ಕಟ್ ಮಾಡುತ್ತಾರೆ. ಆದರೆ ಬಹುತೇಕ ಕನ್ನಡಿಗರು ಹಿಂದಿಯಲ್ಲಿ ಮಾತನಾಡಲು ಹೋಗಿ ವಂಚಕರ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಈ ಆನ್ ಲೈನ್ ವಂಚನೆ ಪ್ರಕರಣಗಳು ಕರ್ನಾಟಕಕ್ಕಿಂತ ತಮಿಳುನಾಡಿನಲ್ಲಿ ತೀರಾ ಕಡಿಮೆ ಎನ್ನಲಾಗಿದೆ. ಕಾರಣ ಅಲ್ಲಿನ ಜನರು ಯಾವುದೇ ಕರೆಗಳು ಬಂದರೂ ತಮಿಳಿನಲ್ಲಿ ಉತ್ತರಿಸುತ್ತಾರೆ. ಇದರಿಂದಾಗಿ ಅವರು ವಂಚನೆಗಳಿಗೆ ತುತ್ತಾಗುವುದು ಕಡಿಮೆ. ಆದ್ದರಿಂದ ಪೊಲೀಸ್ ಆಧಿಕಾರಿಯೊಬ್ಬರು ಹೇಳಿರುವಂತೆ ನಾವೂ ಇಂತಹ ಅನುಮಾನಾಸ್ಪದ ಕರೆಗಳು ಬಂದಾಗ ಕನ್ನಡದಲ್ಲಿಯೇ ಮಾತನಾಡುವುದರಿಂದ ವಂಚನೆಗಳಿಂದ ಪಾರಾಗಬಹುದು ಅನಿಸುತ್ತದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

3 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

4 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

7 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

7 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

7 hours ago