ನಂಜನಗೂಡು ತಾಲ್ಲೂಕು ಮಟ್ಟದ ೭ ವರ್ಷದಿಂದ ೧೪ ವರ್ಷದೊಳಗಿನ ಮಕ್ಕಳ ಕ್ರೀಡಾಕೂಟದಲ್ಲಿ ಆಯೋಜಕರ ನಿರ್ಲಕ್ಷ್ಯದಿಂದಾಗಿ ಮಕ್ಕಳಿಗೆ ಕುಡಿಯುವ ನೀರು ಹಾಗೂ ಊಟ ಇಲ್ಲದೇ ಹಸಿವಿನಿಂದ ಪರದಾಡುವಂತಾಗಿತ್ತು.
ಕ್ರೀಡಾಕೂಟದಲ್ಲಿ ಊಟದ ವ್ಯವಸ್ಥೆ ಇಲ್ಲವೆಂದರೆ ಗ್ರಾಮೀಣ ಪ್ರದೇಶಗಳಿಂದ ಕ್ರೀಡಾ ಕೂಟಕ್ಕೆ ಮಕ್ಕಳನ್ನು ಕರೆತಂದಿದ್ದ ಶಿಕ್ಷಕರಾದರೂ ಊಟದ ವ್ಯವಸ್ಥೆ ಮಾಡ ಬೇಕಿತ್ತು. ಆದರೆ ಶಿಕ್ಷಕರ ಬೇಜವಾಬ್ದಾರಿಯಿಂದ ಮಕ್ಕಳು ಹಸಿವಿನಿಂದ ಬಳಲುವಂತೆ ಮಾಡಿರುವುದು ಬೇಸರದ ಸಂಗತಿ.
ಆಯೋಜಕರು ಇನ್ನು ಮುಂದಾದರೂ ಕ್ರೀಡಾ ಕೂಟಗಳಲ್ಲಿ ಮಕ್ಕಳಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಬೇಕು. ಹಾಗೆಯೇ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನು ಮುಂದೆ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





