Mysore
29
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

dgp murder case

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟಕ್ಕೆ ವಿವಿಯ ಆವರಣದಲ್ಲಿರುವ ಉಪಾಹಾರಗೃಹಗಳನ್ನೇ ಅವಲಂಬಿಸಿದ್ದು, ಬಡ ವಿದ್ಯಾರ್ಥಿಗಳು ದುಬಾರಿ ದರ ನೀಡಲಾಗದೇ ಪರಿತಪಿಸುವಂತಾಗಿದೆ.

ಮಹಾರಾಣಿ ವಾಣಿಜ್ಯ ಕಾಲೇಜು ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ಇದೇ ಮಾದರಿಯಲ್ಲಿ ಮಾನಸ ಗಂಗೋತ್ರಿ ಆವರಣದಲ್ಲಿಯೂ ಇಂದಿರಾ ಕ್ಯಾಂಟೀನ್ ಆರಂಭಿಸುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರು ಕ್ರಮ ಕೈಗೊಳ್ಳಬೇಕಾಗಿದೆ.

-ಶಿವು ಬಂಡಳ್ಳಿ, ಸಂಶೋಧನಾ ವಿದ್ಯಾರ್ಥಿ, ಮಾನಸ ಗಂಗೋತ್ರಿ, ಮೈಸೂರು

Tags:
error: Content is protected !!