Mysore
19
few clouds

Social Media

ಬುಧವಾರ, 21 ಜನವರಿ 2026
Light
Dark

ಓದುಗರ ಪತ್ರ: ಹೊಸ ರೈಲು ಸಂಚಾರ ಆರಂಭಿಸಿ

ಓದುಗರ ಪತ್ರ

ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ. ಆದರೆ ಈ ರೈಲು ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬಾರದೇ ಇರುವುದರಿಂದ ಬೆಂಗಳೂರಿಗೆ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗುತ್ತಿದೆ.

ಆದ್ದರಿಂದ ಮೈಸೂರು ರೈಲ್ವೆ ವಿಭಾಗದ ಅಧಿಕಾರಿಗಳು ಹಾಗೂ ಸಂಸದರು ಪ್ರತಿದಿನ ಬೆಳಿಗ್ಗೆ ೭.೩೦ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

Tags:
error: Content is protected !!